ⓘ ಘೊಣಸಗಿ

                                     

ⓘ ಘೊಣಸಗಿ

ಲಾವಣಿ ಪದ, ಡೊಳ್ಳಿನ ಪದ, ಗೀಗೀ ಪದ, ಹಂತಿ ಪದ, ಜಾನಪದ, ಡೊಳ್ಳು ಕುಣಿತ, ಕರಡಿ ಮಜಲು, ಮೊಹರಮ ಹೆಜ್ಜೆ ಕುಣಿತ, ಹರಿ ಭಜನೆ ಮತ್ತು ಶಿವ ಭಜನೆ ಇತ್ಯಾದಿ ಗ್ರಾಮದ ಕಲೆಯಾಗಿದೆ.

                                     

1. ಕೃಷಿ

ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು 75% ಜನರು ಕೆಲಸ ಮಾಡುತ್ತಾರೆ.

ನೀರಾವರಿ

ಗ್ರಾಮದಲ್ಲಿ ಬಹುಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿಈರುಳ್ಳಿ, ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾಕಡಲೆಕಾಯಿ, ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

                                     

2. ಉದ್ಯೋಗ

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 70% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಡುಮೇಕೆ ಸಾಕಾಣಿಕೆ ಮತ್ತು ಕುರಿ ಸಾಕಾಣಿಕೆ ಉಪಕಸುಬುಗಳಾಗಿವೆ.

                                     

3. ಬೆಳೆ

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ ಈರುಳ್ಳಿ ಮತ್ತು ಶೇಂಗಾಕಡಲೆಕಾಯಿ ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.